Job Description: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ರಾಷ್ಟ್ರೀಯ ಮೂಲಸೌಕರ್ಯ ಪೈಪ್ಲೈನ್ ಆನ್ಲೈನ್ ಡ್ಯಾಶ್ಬೋರ್ಡ್ ಅನ್ನು ಬಿಡುಗಡೆಗೊಳಿಸಿದರು. ಇದು ಮೂಲಸೌಕರ್ಯ ಯೋಜನೆಗಳ ಬಗ್ಗೆ ಮಾಹಿತಿ ಹುಡುಕುತ್ತಿರುವ ಎಲ್ಲರಿಗೂ ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ. ಮುಂದಿನ 5 ವರ್ಷಗಳ ಕಾಲ ದೇಶದ ಮೂಲಸೌಕರ್ಯ ಯೋಜನೆಗಳಿಗಾಗಿ 100 ಲಕ್ಷ ಕೋಟಿ ರೂ.ಗಳ ಹೂಡಿಕೆ ಮಾಡಲು ಕೇಂದ್ರ ಹಣಕಾಸು ಸಚಿವರು ತಮ್ಮ 2019-20ರ ಬಜೆಟ್ ನಲ್ಲಿ ಘೋಷಿಸಿದ್ದರು.