Job Description: ಅವಿಭಕ್ತ ಕುಟುಂಬದ ಹೆಣ್ಣುಮಕ್ಕಳಿಗೆ ಹಿಂದೂ ಉತ್ತರಾಧಿಕಾರ (ತಿದ್ದುಪಡಿ) ಕಾಯ್ದೆ ಅನುಸಾರ, ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕುಗಳಿವೆ ಎಂದು ಸುಪ್ರೀಂ ಕೋರ್ಟ್ ಇತ್ತೀಚಿಗೆ ಮಹತ್ವದ ತೀರ್ಪು ನೀಡಿದೆ ತಿದ್ದುಪಡಿ ಕಾಯ್ದೆ ಜಾರಿಗೆ ಬರುವ ಮುನ್ನ ಒಂದು ವೇಳೆ ತಂದೆ ತೀರಿಕೊಂಡಿದ್ದರೂ, ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳು ಸಮಾನ ಹಕ್ಕು ಹೊಂದಿರುತ್ತಾರೆ. ಹಾಗೂ 2005ರಲ್ಲಿ ಕಾಯ್ದೆಯ ತಿದ್ದುಪಡಿಯು ಪೂರ್ವಾನ್ವಯ ಆಗಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಎಸ್. ಅಬ್ದುಲ್ ನಜೀರ್ ಹಾಗೂ ಎಂ.ಆರ್.ಶಾ ಅವರ ನ್ಯಾಯಪೀಠ ಈ ತೀರ್ಪು ನೀಡಿದೆ. ‘ಕಾಯ್ದೆಯು ತಿದ್ದುಪಡಿಗೊಂಡು ಜಾರಿಗೆ ಬಂದ ನಂತರ ಅಥವಾ ಅದಕ್ಕೂ ಮೊದಲೇ ಜನಿಸಿದ ಗಂಡು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಮೇಲೆ ಯಾವ ಹಕ್ಕುಗಳಿವೆಯೋ ಅವೇ ಹಕ್ಕುಗಳು ಹೆಣ್ಣುಮಕ್ಕಳಿಗೂ ಇವೆ’ ಎಂದು ನ್ಯಾಯಪೀಠ ಹೇಳಿದೆ.