Job Description: ಅಯೋಧ್ಯೆ: ಇತ್ತೀಚಿಗೆ ರಾಮಮಂದಿರಕ್ಕೆ ಭೂಮಿ ಪೂಜೆ ನಡೆದ ಬಳಿಕ, ರೈಲ್ವೆ ನಿಲ್ದಾಣದ ಮರುವಿನ್ಯಾಸದ ಯೋಜನೆ ಕೈಗೊಳ್ಳಾಯಿತು. ಇದೀಗ ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲು ಉತ್ತರ ಪ್ರದೇಶ ಸರಕಾರ ನಿರ್ಧಾರ ಕೈಗೊಂಡಿದೆ. ಈಗಾಗಲೇ ಅಯೋಧ್ಯೆ ಏರ್ಪೋರ್ಟ್ಗೆ 525 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ನಿಲ್ದಾಣಕ್ಕಾಗಿ ಹೆಚ್ಚುವರಿ ಭೂಮಿಯನ್ನು ಸ್ವಾಧೀನ ಪಡಿಸಕೊಳ್ಳಲಾಗುವುದೆಂದು ತಿಳಿದು ಬಂದಿದೆ. ರಾಮನ ಹೆಸರು: ಅಯೋಧ್ಯೆಯಲ್ಲಿ ನವೀಕರಿಸಲಾಗುತ್ತಿರುವ ಈ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡಲಾಗುವುದೆಂದು ಉ.ಪ್ರ. ನಾಗರಿಕ ವಿಮಾನಯಾನ ಸಚಿವ ನಂದಗೋಪಾಲ್ ಗುಪ್ತಾ ನಂದಿ ತಿಳಿಸಿದ್ದಾರೆ.