Job Description: ನವದೆಹಲಿ: ಸ್ವಾತಂತ್ರಾನಂತರ ಭಾರತದಲ್ಲಿ ಅನೇಕ ಜನ ಪ್ರದಾನಿಗಳಾಗಿದ್ದು, ಅದರಲ್ಲಿ ಬಹುತೇಕ ಜನ ಪ್ರಧಾನಿಗಳು ಕಾಂಗ್ರೆಸ್ ಪಕ್ಷದವರಾಗಿದ್ದರು. ಪ್ರಸ್ತುತ ಅತಿ ಹೆಚ್ಚು ಅವಧಿಗೆ ಆಡಳಿತ ನಡೆಸಿದ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಹಾಗೂ ಅತಿ ಹೆಚ್ಚು ಅವಧಿಗೆ ಆಡಳಿತ ನಡೆಸಿದ ಪ್ರಧಾನಿಗಳ ಪಟ್ಟಿಯಲ್ಲಿ ಮೋದಿಯವರು ನಾಲ್ಕನೇ ಸ್ಥಾನ ಪಡೆದಿದ್ದಾರೆ. * ಈ ಮೊದಲು ಅಟಲ್ ಬಿಹಾರಿ ವಾಜಪೇಯಿ ಅವರು 2,268 ದಿನ ಆಡಳಿತವನ್ನು ನಡೆಸಿದ್ದರು. * ನೆಹರೂ, ಇಂದಿರಾ ಗಾಂಧಿ, ಮನಮೋಹನ್ ಸಿಂಗ್ ಕ್ರಮವಾಗಿ ಅತಿ ಹೆಚ್ಚು ದಿನ ಆಡಳಿತ ನಡೆಸಿದ ಪ್ರಧಾನಿಗಳಾಗಿದ್ದಾರೆ.