Job Description: ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಮತ್ತು ಹಿರಿಯ ಆಟಗಾರ ಸುರೇಶ್ ರೈನಾ ಅವರು ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಮಹೇಂದ್ರ ಸಿಂಗ್ ದೋನಿಯವರ ಸಾದನೆಗಳು ಹೀಗಿವೆ : * ಧೋನಿ ನಾಯಕತ್ವದಲ್ಲಿ ಭಾರತ ತಂಡವು 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. 2014ರಲ್ಲಿ ಅವರು ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. * ICC ಏಕದಿನ ಕ್ರಿಕೆಟ್ ವಿಶ್ವಕಪ್, ICC ಟಿ20 ಕ್ರಿಕೆಟ್ ವಿಶ್ವಕಪ್ ಮತ್ತು ICC ಚಾಂಪಿಯನ್ಸ್ ಟ್ರೋಫಿ ಗೆದ್ದ ವಿಶ್ವದ ಏಕಮಾತ್ರ ಕ್ಯಾಪ್ಟನ್. * ಏಕದಿನ ಕ್ರಿಕೆಟ್ನಲ್ಲಿ 5ನೇ ಮತ್ತು ಅದಕ್ಕಿಂತಲೂ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅತಿ ಹೆಚ್ಚು ರನ್ಗಳಿಸಿದ ಬ್ಯಾಟ್ಸ್ಮನ್ (8324 ರನ್). * ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ನಾಯಕನಾಗಿ ಅತಿ ಹೆಚ್ಚು ಪಂದ್ಯಗಳನ್ನು (332) ಆಡಿದ ಕೀರ್ತಿ. * ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸ್ಟಂಪಿಂಗ್ ಮಾಡಿದ ವಿಶ್ವದಾಖಲೆ (195 ಸ್ಟಂಪಿಂಗ್ಸ್). * 2010ರಲ್ಲಿ ಭಾರತಕ್ಕೆ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಪಟ್ಟ ತಂದುಕೊಟ್ಟ ನಾಯಕ.