Job Description: ಚಿತ್ರದುರ್ಗ ಜಿಲ್ಲೆಯ ಪಟ್ಟಣ ಪಂಚಾಯಿತಿಯಾದ ಹೊಳಲ್ಕೆರೆಗೆ ಕೇಂದ್ರ ಸರ್ಕಾರವು ನೀಡುವ 'ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ-2020' ಲಭಿಸಿದೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಪಟ್ಟಣಕ್ಕೆ ಪ್ರಶಂಶೆ ಲಭಿಸಿದೆ. 'ಸ್ವಚ್ಛ ಸರ್ವೇಕ್ಷಣೆ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಬರುವ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಕೇಂದ್ರ ಸರ್ಕಾರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿ ಬಂದಿರುವುದು ನಮಗೆ ಸಂತಸವನ್ನುಂಟುಮಾಡಿದೆ ಹಾಗೂ ಶೀಘ್ರದಲ್ಲೇ ಪ್ರಧಾನಿ ಮೋದಿಯರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ವಾಸಿಂ ಸಂತಸ ಹಂಚಿಕೊಂಡರು.