Job Description: ನವದೆಹಲಿ : ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರವು ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳ ಗುತ್ತಿಯನ್ನು ಅದಾನಿ ಸಮೂಹಕ್ಕೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ. ನಾಗರಿಕ ವಿಮಾನಯಾನ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮೂರು ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮತ್ತು ಎಎಐ ಮೂಲಕ ಗುತ್ತಿಗೆಗೆ ನೀಡಲು ಅನುಮೋದನೆ ನೀಡಲಾಗಿದ್ದು, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಗುತ್ತಿಗೆಯನ್ನು ಅದಾನಿ ಗ್ರೂಪ್ ಗೆ ನೀಡಲಾಗಿದೆ.