Job Description: ರಾಷ್ಟ್ರ ರಾಜಧಾನಿ ನವದೆಹಲಿಯ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ, 'ಭಾರತೀಯ ಭಾಷಾ ಕೇಂದ್ರ ಮತ್ತು ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನ' ಕೇಂದ್ರದ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕರಾಗಿ ಡಾ.ವಿಶ್ವನಾಥ್ ಅವರನ್ನು ನೇಮಕಮಾಡಲಾಗಿದೆ. ಡಾ.ವಿಶ್ವನಾಥ್ ಅವರು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಳಗಳರಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ಮೈಸೂರಿನ ಮಹಾರಾಜ ಪದವಿ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.