Job Description: ತೆಲಂಗಾಣ ಮತ್ತು ಆಂಧ್ರಪ್ರದೇಶ ಗಡಿ ಪ್ರದೇಶದ ಕೃಷ್ಣ ನದಿಗೆ ಕಟ್ಟಲಾಗಿರುವ ಶ್ರೀಶೈಲಂ ಜಲವಿದ್ಯುದಾಗಾರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಸುಮಾರು ಒಂಬತ್ತು ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಶ್ರೀಶೈಲಂ ಎಡದಂಡೆ ಜಲವಿದ್ಯುದಾಗಾರದಲ್ಲಿ ಶಾರ್ಟ್ ಸರ್ಕಿಟ್ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ತೆಲಂಗಾಣ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ(ಜೆನ್ಕೊ) ಈ ಘಟಕವನ್ನು ನಿರ್ವಹಿಸುತ್ತಿದ್ದು, ಈ ಘಟನೆ ಬಗ್ಗೆ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.