Job Description: ಜಿನೀವಾ: ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಗೇಬ್ರಿಯಾಸಿಸ್ ಅವರು ಬರುವ ೨ ವರ್ಷ ಅವಧಿಯಲ್ಲಿ ವಿಶ್ವದಲ್ಲಿ ಕೊರೋನ ವೈರಸ್ ಸಾಂಕ್ರಾಮಿಕ ನಿರ್ಮೂಲನೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಈ ಮೊದಲು 1918ರಲ್ಲಿ ಇಡೀ ವಿಶ್ವವನ್ನು ಕಾಡಿದ್ದ ಸ್ಪ್ಯಾನಿಶ್ ಫ್ಲೂ ಕೂಡ ಎರಡು ವರ್ಷ ಅವಧಿಯಲ್ಲಿ ಅಂತ್ಯವಾಗಿತ್ತು ಎಂದು ಅವರು ತಿಳಿಸಿದ್ದಾರೆ. ವಿಶ್ವಾದ್ಯಂತ 2.28 ಕೋಟಿ ಮಂದಿಗೆ ಸೋಂಕು ತಗುಲಿದ್ದು, 7,93,382 ಮಂದಿ ಇದುವರೆಗೆ ಸೋಂಕಿಗೆ ಬಲಿಯಾಗಿದ್ದಾರೆ ಎಂದು ರಾಯ್ಟರ್ಸ್ ಅಂಕಿ ಅಂಶಗಳಿಂದ ತಿಳಿದುಬಂದಿದೆ.