Job Description: ಮೂಡುಬಿದಿರೆ : ಜೈನ ಕಾಶಿ ಮೂಡುಬಿದಿರೆಯ ಸಾವಿರ ಕಂಬದ ಬಸದಿ ಎಂದೇ ಪ್ರಸಿದ್ಧವಾದ ತ್ರಿಭುವನ ತಿಲಕ ಚೂಡಾಮಣಿ ಬಸದಿಯು ವಿಶ್ವ ಪರಂಪರೆಯ ಪಾರಂರಪರಿಕ ಪಟ್ಟಿಯಲ್ಲಿ ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿಗಳ ಪೈಕಿ ಮೂರನೇ ಸ್ಥಾನ ಪಡೆದಿದೆ. ಈ ಕುರಿತು ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ಅತ್ಯಂತ ಸೂಕ್ಷ್ಮ ಕೆತ್ತನೆಯ ತೀರ್ಥಂಕರ ಜಿನ ಬಿಂಬಗಳು, ಸರ್ವ ಧರ್ಮ ಸಮನ್ವಯದ ಅನೇಕ ಕಲ್ಲಿನ ಚಿತ್ತಾರಗಳು, ಬೆಡಗಿನ ಭಿತ್ತಿಚಿತ್ರಗಳುಳ್ಳ ವಾಸ್ತುವೈಭವದ ಬಸದಿಗಳ ಪಟ್ಟಿಯಲ್ಲಿ ಸಾವಿರ ಕಂಬದ ಬಸದಿಯು ಅತ್ಯಂತ ಆಕರ್ಷಿಣೀಯವಾಗಿದೆ.