Job Description: ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ದೆಹಲಿಯಲ್ಲಿ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ 41 ನೇ ಜಿಎಸ್ಟಿ ಕೌನ್ಸಿಲ್ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಎಸ್ಟಿ ಆದಾಯ ಕುಸಿತ ಮತ್ತು ರಾಜ್ಯಗಳಿಗೆ ನೀಡಬೇಕಾದ ಜಿಎಸ್ಟಿ ಪರಿಹಾರದ ಮೊತ್ತದ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು. * ಇದೇ ವೇಳೆ 2019-20ನೇ ಸಾಲಿನಲ್ಲಿ ರಾಜ್ಯಗಳಿಗೆ ಜಿಎಸ್ಟಿ ಪರಿಹಾರವಾಗಿ ಕೇಂದ್ರ ಸರ್ಕಾರ 1.65 ಲಕ್ಷ ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. * ಜುಲೈ 2017 ರಿಂದ ಜೂನ್ 2022 ರವರೆಗೆ ಪರಿವರ್ತನೆಯ ಅವಧಿಗೆ ಜಿಎಸ್ಟಿ ಪರಿಹಾರವನ್ನು ಪಾವತಿಸಬೇಕಾಗಿದೆ ಎಂದು ಅಟಾರ್ನಿ ಜನರಲ್ ಮಾಹಿತಿ ನೀಡಿದ್ದಾರೆ.