Job Description: ಚೆನ್ನೈ: ಕೋವಿಡ್-19 ಸೋಂಕಿನ ಕಾರಣದಿಂದ ಎಲ್ಲ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಹೊರತುಪಡಿಸಿ ಉಳಿದೆಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಿ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಆದೇಶ ಹೊರಡಿಸಿದ್ದಾರೆ. * ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಉನ್ನತ ಮಟ್ಟದ ಸಮಿತಿಯ ಶಿಫಾರಸು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. * ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ನಿಯಮಗಳಿಗನುಗುಣವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಇದೆ ವೇಳೆ ಮುಖ್ಯಮಂತ್ರಿ ಪಳನಿಸ್ವಾಮಿ ತಿಳಿಸಿದರು.