Job Description: ಝಾನ್ಸಿ: ರಾಣಿ ಲಕ್ಷ್ಮಿ ಬಾಯಿ ಕೇಂದ್ರ ಕೃಷಿ ವಿಶ್ವವಿದ್ಯಾಲಯದ ಕಟ್ಟಡಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ವಿಡಿಯೋ ಕಾನ್ಫರೆನ್ಸಿಂಗ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದರು. ಈ ಕೃಷಿ ವಿಶ್ವವಿದ್ಯಾಲಯವು ಝಾನ್ಸಿ ನಗರದಲ್ಲಿದ್ದು, ಬುಂದೇಲ್ಖಂಡ ಪ್ರದೇಶದ ಪ್ರಮುಖ ಸಂಸ್ಥೆಯಾಗಿದೆ. ಈ ಕೃಷಿ ವಿಶ್ವವಿದ್ಯಾಲಯವು 2014-15ರಲ್ಲಿ ಪ್ರಾರಂಭವಾಗಿದ್ದು, ಈಗ ಕೃಷಿ, ತೋಟಗಾರಿಕೆ ಮತ್ತು ಅರಣ್ಯಶಾಸ್ತ್ರ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳನ್ನು ನಡೆಸುತ್ತಿದೆ.