Job Description: ನವದೆಹಲಿ : ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನವಾಗಿರುವ ಏರ್ ಇಂಡಿಯಾ ಪ್ರದರ್ಶನವನ್ನು ಪ್ರತಿವರ್ಷದಂತೆ ಈ ವರ್ಷವೂ ಕೂಡ ಬೆಂಗಳೂರಿನಲ್ಲಿ ಆಯೋಜಿಸಲು ರಕ್ಷಣಾ ಸಚಿವಾಲಯ ತೀರ್ಮಾನ ಕೈಗೊಂಡಿದೆ. * ಈ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು 2021ರ ಫೆಬ್ರವರಿ 3 ರಿಂದ 5 ರವರೆಗೆ ಆಯೋಜಿಸಲಾಗಿದ್ದು, ಫೆಬ್ರವರಿ 6, 7 ರಂದು ಸಾರ್ವಜನಿಕರಿಗೆ ಪ್ರವೇಶ ನೀಡಲು ನಿರ್ಧರಿಸಲಾಗಿದೆ. * ದೆಹಲಿಯಲ್ಲಿ ನಡೆದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇತ್ತೀಚಿಗೆ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.