Job Description: ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರವು ಇಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಅನುಕೂಲಕ್ಕಾಗಿ ಅಭಿವೃದ್ಧಿಪಡಿಸಿಸಲಾಗಿರುವ "ಶಿಕ್ಷಕ ಮಿತ್ರ" ಆಯಪ್ ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸದರು. ರಾಜ್ಯದಲ್ಲಿ ಸುಮಾರು 2.50 ಲಕ್ಷ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಈ ಅಯಪ್ ಮೂಲಕ ಇವರ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆ ಹರಿಸಲು ಸಹಕಾರಿಯಾಗಲಿದೆ. ಅಲ್ಲದೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆಯಪ್ ಮೂಲಕ ಮಾಡಲಾಗುವದು.