Job Description: ನವದೆಹಲಿ: ಮಾಜಿ ಹಣಕಾಸು ಕಾರ್ಯದರ್ಶಿಯಾಗಿರುವ ರಾಜೀವ್ ಕುಮಾರ್ ಅವರು ಕೇಂದ್ರ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ದಿನಾಂಕ ಆಗಸ್ಟ್ 31 ರಂದು ಚುನಾವಣಾ ಆಯುಕ್ತ ಅಶೋಕ್ ಲವಾಸಾ ಅವರ ಸೇವೆ ಅಂತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜೀವ್ ಕುಮಾರ್ ಅವರನ್ನು ಕೇಂದ್ರ ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ. ರಾಜೀವ್ ಕುಮಾರ್ 1984ರ ಬ್ಯಾಚಿನ ಜಾರ್ಖಂಡ್ ಕೇಡರ್ ನ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದು, ಸಾರ್ವಜನಿಕ ನೀತಿ ಮತ್ತು ಆಡಳಿತ ಕ್ಷೇತ್ರಗಳಲ್ಲಿ ಸುಮಾರು 30 ಕ್ಕೂ ಅಧಿಕ ವರ್ಷಗಳ ಅನುಭವವನ್ನು ಹೊಂದಿದ್ದಾರೆ.