Job Description: ಜಮ್ಮು ಕಾಶ್ಮೀರದಲ್ಲಿ ಇದುವರೆಗೆ ಉರ್ದು ಹಾಗೂ ಇಂಗ್ಲಿಷ್ ಭಾಷೆಗಳು ಮಾತ್ರ ಅಧಿಕೃತ ಭಾಷೆಗಳಾಗಿದ್ದವು, ಪ್ರಸ್ತುತ ಕಾಶ್ಮೀರಿ, ಡೋಗ್ರಿ ಹಾಗೂ ಹಿಂದಿ ಭಾಷೆಗಳನ್ನು ಅಧಿಕೃತ ಭಾಷೆ ಎಂಬ ಮಾನ್ಯತೆ ನೀಡುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದೆ ವೇಳೆ ಕೇಂದ್ರ ಸಚಿವ ಪ್ರಕಾಶ ಜವಾಡೆಕರ ಅವರು ‘ಜಮ್ಮು ಕಾಶ್ಮೀರ ಅಧಿಕೃತ ಭಾಷಾ ಮಸೂದೆ–2020’ ಅನ್ನು ಮುಂಬರುವ ಲೋಕಸಭೆಯ ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ತಿಳಿಸಿದರು.