Job Description: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನೀಡಲಾಗುವ ‘ಅಭಿನವ ಭಾರ್ಗವ ಡಾ.ವಿಷ್ಣುವರ್ಧನ ಕಲಾ ದತ್ತಿ ಪ್ರಶಸ್ತಿ’ಯ ಪ್ರಸಕ್ತ ಸಾಲಿನ ಗೌರವಕ್ಕೆ ಕನ್ನಡ ಚಲನಚಿತ್ರ ನಟರಾದ "ಸುದೀಪ್" ಅವರು ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮನು ಬಳಿಗಾರ್ ಅವರ ನೇತೃತ್ವದಲ್ಲಿ ಇತ್ತೀಚಿಗೆ ನಡೆದ ಸಭೆಯಲ್ಲಿ ನಟ ಸುದೀಪ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಈ ಪ್ರಶಸ್ತಿಯು ₹ 25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುವುದಾಗಿ ಪರಿಷತ್ನ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಮಾಹಿತಿ ನೀಡಿದ್ದಾರೆ.