Job Description: ನವದೆಹಲಿ: ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ಮತ್ತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರ ವಿರುದ್ಧದ ವಿವಾದಾತ್ಮಕ ಟ್ವೀಟ್ ಮಾಡಿದ್ದರು. ಈ ಹಿನ್ನಲೆ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದಡಿಯಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದೋಷಿಯಾಗಿದ್ದ ಪ್ರಶಾಂತ್ ಭೂಷಣ್ಗೆ 1 ರೂ. ದಂಡ ಕಟ್ಟುವಂತೆ ಸುಪ್ರೀಂಕೋರ್ಟ್ ಇತ್ತೀಚಿಗೆ ತೀರ್ಪು ನೀಡಿ ನ್ಯಾ. ಅರುಣ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ತಿಳಿಸಿದೆ. * ಪ್ರಶಾಂತ್ ಭೂಷಣ್ ಅವರಿಗೆ ಹೇಳಿಕೆ ಹಿಂಪಡೆದು ಕ್ಷಮೆ ಕೇಳುವಂತೆ ಸುಪ್ರೀಂಕೋರ್ಟ್ ಅವಕಾಶ ನೀಡಿತ್ತಾದರೂ, ಇವರು ಶಿಕ್ಷೆ ಸ್ವೀಕರಿಸಲು ಸಿದ್ಧ ಎಂದಿದ್ದರು.