Job Description: ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ದೇಶೀಯ ರಕ್ಷಣಾ ತಂತ್ರಜ್ಞಾನ ಉಪಯೋಗಿಸಿಕೊಂಡು ನಿರ್ಮಿಸಿದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್ಸ್ಟ್ರೇಟರ್ ವೆಹಿಕಲ್ (ಎಚ್ಎಸ್ಟಿಡಿವಿ) ತನ್ನ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಹಾರಾಟ ನಡೆಸಿದೆ. ಈ ಮೂಲಕ ಆತ್ಮನಿರ್ಭರ ಭಾರತದತ್ತ ಮಹತ್ವದ ಮೈಲಿಗಲ್ಲಾಗಿದೆ. * ಒಡಿಶಾದ ಕರಾವಳಿ ತೀರ ಪ್ರದೇಶದಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ಕ್ಷಿಪಣಿ ಉಡಾವಣಾ ಕೇಂದ್ರದಿಂದ ಎಚ್ಎಸ್ ಟಿಡಿವಿ ಯಶಸ್ವಿಯಾಗಿ ಹಾರಾಟ ನಡೆಸಿದೆ.