Job Description: ನವದೆಹಲಿ : ದೇಶದಲ್ಲಿ ಕೋರೋಣ ಇಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೀದಿಬದಿ ವ್ಯಾಪಾರಿಗಳಿಗೆ ನೆರವು ನೀಡಲು ಕೇಂದ್ರ ಸರ್ಕಾರವು ಹೊಸ "ಪ್ರಧಾನಮಂತ್ರಿ ಸ್ವನಿಧಿ ಯೋಜನೆ" ಜಾರಿಗೊಳಿಸಲು ಚಿಂತಿಸುತ್ತಿದೆ. ಭಾರತ ಲಾಕ್ ಡೌನ್ ನಿಂದಾಗಿ ಬೀದಿಬದಿ ವ್ಯಾಪಾರಿಗಳು ಆದಾಯವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ಬಡ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮೂಲಕ ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೂಲಕ ವ್ಯಾಪಾರಿಗಳ ಬದುಕಿಗೆ ಆರ್ಥಿಕ ಶಕ್ತಿ ತುಂಬುವ ಹಾಗೂ ಪುನಶ್ಚೇತನಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.