Job Description: ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ದಿನಾಂಕ ಸೆಪ್ಟೆಂಬರ್ 10 ರಂದು "ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್.ವೈ) ಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಚಾಲನೆ ನೀಡಿದರು. ಇದೆ ವೇಳೆ ಅವರು ರೈತರ ನೇರ ಬಳಕೆಗಾಗಿ ತಳಿ ಸುಧಾರಣಾ ಮಾರುಕಟ್ಟೆ ಮತ್ತು ಮಾಹಿತಿ ಪೋರ್ಟಲ್ ಆಗಿರುವ "ಇ-ಗೋಪಾಲ ಆಪ್" ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ : ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್.ವೈ)ಯು ಅಂದಾಜು 20,050 ಕೋಟಿ ರೂ. ಹೂಡಿಕೆಯ ಮಹತ್ವದ ಯೋಜನೆಯಾಗಿದ್ದು, ಈ ಯೋಜನೆಯ ಮೂಲಕ ದೇಶದ ಮೀನುಗಾರಿಕೆ ವಲಯದ ಸುಸ್ಥಿರ ಅಭಿವೃದ್ಧಿಗೆ ಗಮನಹರಿಸಲಾಗುವದು. * ಈ ಯೋಜನೆಯು ಆತ್ಮ ನಿರ್ಭರ ಭಾರತ ಯಾಜನೆ ಅಡಿಯಲ್ಲಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 2020-21 ರಿಂದ 2024-25ರ ನಡುವೆ ಒಟ್ಟು 5 ಆರ್ಥಿಕ ವರ್ಷ ಕಾರ್ಯನಿರ್ವಹಿಸಲಿದೆ. * ಈ ಯೋಜನೆಯ ಮೂಲಕ ಮೀನು ಉತ್ಪಾದನೆಯನ್ನು 2024-25ರ ಹೊತ್ತಿಗೆ ಹೆಚ್ಚುವರಿಯಾಗಿ 70 ಲಕ್ಷ ಟನ್ ಹೆಚ್ಚಳ ಮಾಡುವ ಗುರಿ ಹೊಂದಲಾಗಿದೆ. ಅಲ್ಲದೆ ರಪ್ತಿನ ಗಳಿಕೆಯನ್ನು 1,00,000 ಕೋಟಿ ರೂ.ಗಳಿಗೆ ಹೆಚ್ಚಿಸುವ ಮೂಲಕ ಆದಾಯವನ್ನು ದುಪ್ಪಟ್ಟು ಮಾಡುವ ಗುರಿ ಹೊಂದಿದೆ.