Job Description: ಜುಲೈ ತಿಂಗಳಲ್ಲಿ ಫ್ರಾನ್ಸ್ ನಿಂದ ಭಾರತಕ್ಕೆ ಬಂದಿಳಿದಿದ್ದ ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಳ್ಳಲಾಯಿತು. ಭಾರತ ಹಾಗೂ ಚೀನಾ ಗಡಿ ಭಾಗದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಸಮಯದಲ್ಲಿ ರಫೆಲ್ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ತೀವ್ರ ಬಲ ನೀಡಲಿವೆ. * ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿಸಿರುವ 5 ರಫೇಲ್ ಫೈಟರ್ ಜೆಟ್ ವಿಮಾನಗಳ ಪೈಕಿ ಎರಡು ವಿಮಾನಗಳು 2 ಸೀಟರ್ ತರಬೇತಿ ವಿಮಾನಗಳಾಗಿದ್ದು, 3 ಸಿಂಗಲ್ ಸೀಟರ್ ಯುದ್ಧ ವಿಮಾನಗಳಾಗಿವೆ.