Job Description: ಹುಬ್ಬಳ್ಳಿ : ರಾಜ್ಯದ ವಾಣಿಜ್ಯ ನಗರಿ ಎಂದೇ ಪ್ರಸಿದ್ದವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಇಲ್ಲಿನ ಜನರ ಆರಾಧ್ಯ ದೈವರಾಗಿರುವ ಸಿದ್ಧಾರೂಢ ಸ್ವಾಮೀಜಿ ಹೆಸರಿಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಇಲ್ಲಿನ ಜನರ ಬಹು ದಿನದ ಬೇಡಿಕೆ ಈಡೇರಿದೆ. 2009ರಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಕೆ.ಎಚ್. ಮುನಿಯಪ್ಪ, ಹಲವು ರಾಜ್ಯ ಮತ್ತು ಕೇಂದ್ರದ ಜನಪ್ರತಿನಿಧಿಗಳು, ಭಕ್ತರು ಮತ್ತು ಸಿದ್ಧಾರೂಢ ಸ್ವಾಮಿ ಮಠ ಟ್ರಸ್ಟ್ ಸಮಿತಿ ಸದಸ್ಯರು ನಿರಂತರವಾಗಿ ಮನವಿ ಸಲ್ಲಿಸಿ ಅನುಮತಿ ಕೇಳಿದ್ದರ ಪರಿಣಾಮವಾಗಿ ಹುಬ್ಬಳ್ಳಿ ರೈಲು ನಿಲ್ದಾಣವನ್ನು 'ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ' ಎಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.