Job Description: ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2020ನೇ ಸಾಲಿನ “ನೃಪತುಂಗ ಸಾಹಿತ್ಯ ಪ್ರಶಸ್ತಿ’ ಗೆ ಹಿರಿಯ ವಿಮರ್ಶಕ ಡಾ| ಜಿ. ಎಸ್. ಆಮೂರರವರು ಭಾಜನರಾಗಿದ್ದಾರೆ. * ಪ್ರಶಸ್ತಿಯು 7,00,001 ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಇತ್ತೀಚಿಗೆ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರರವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ಡಾ| ಜಿ.ಎಸ್.ಆಮೂರ ಹೆಸರನ್ನು ಅಂತಿಮಗೊಳಿಸಲಾಯಿತು, ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತೀರ್ಮಾನಿಸಲಾಯಿತು.