Job Description: ವಾಷಿಂಗ್ಟನ್ : ಇತ್ತೀಚಿಗೆ ಅಮೆರಿಕಾವು ಹಿಂದೂ ಮಹಾಸಾಗರದಲ್ಲಿ ಶಾಂತಿ ಹಾಗೂ ಭದ್ರತೆ ದೃಷ್ಟಿಯಿಂದ ಮಾಲ್ಡೀವ್ಸ್ ಜೊತೆ ಅಮೆರಿಕವು ರಕ್ಷಣಾ ಸಹಕಾರ ಒಪ್ಪಂದ ಮಾಡಿಕೊಂಡಿದೆ. ಇಂಡೋ-ಪೆಸಿಫಿಕ್ ಭಾಗದಲ್ಲಿ ಚೀನಾ ರಾಷ್ಟ್ರವು ತನ್ನ ಪ್ರಭಾವವನ್ನು ಹೆಚ್ಚಿಸಲು ಯತ್ನಿಸುತ್ತಿದ್ದು, ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಗ್ವಾದರ್ ಬಂದರನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಅಮೆರಿಕವೂ ಇಂಡೋ-ಪೆಸಿಫಿಕ್ ಭಾಗದಲ್ಲಿ ಚೀನಾದ ಪ್ರಾಭಲ್ಯ ತಪ್ಪಿಸಲು ಹಾಗೂ ತನ್ನ ನಿಯಂತ್ರಣ ಸಾಧಿಸಲು ಈ ಒಪ್ಪಂದ ಮಾಡಿಕೊಂಡಿರುವುದಾಗಿ ವಿಶ್ಲೇಷಿಸಲಾಗುತ್ತಿದೆ.