Job Description: ಅಮರಾವತಿ: ಆಂಧ್ರಪ್ರದೇಶದಲ್ಲಿ ವಿಧಾನಪರಿಷತನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಂಧ್ರಪ್ರದೇಶ ಸರ್ಕಾರ ಮನವಿ ಮಾಡಿದೆ. ಪ್ರಸ್ತುತ ಆಂಧ್ರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ YRS ಕಾಂಗ್ರೆಸ್ ಪಕ್ಷದ ಎಲ್ಲ ಸಂಸದರು ಈ ಕುರಿತ ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಎಪಿ ದಿಶಾ ಕ್ರಿಮಿನಲ್ ಲಾ (ಎಪಿ ಅಮೆಂಡಮೆಂಟ್) ಬಿಲ್ ಅನ್ನು ಪರಿಗಣಿಸಿ ರಾಷ್ಟ್ರಪತಿಯವರ ಅನುಮೋದನೆ ದೊರಕಲು ಹಾಗೂ ಅದನ್ನು ಕಾನೂನು ಮಾಡಲು ಅನುವುಮಾಡಿಕೊಡಲು ಸಹಕರಿಸಬೇಕು ಎಂದೂ ಕೇಂದ್ರಕ್ಕೆ ಸಲ್ಲಿಸಿದ ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ. * ಆಂಧ್ರಪ್ರದೇಶ ವಿಧಾನ ಪರಿಷತ್ ರದ್ದುಗೊಳಿಸುವುದಕ್ಕೆ ಸಂಬಂಧಿಸಿದ ಶಾಸನಾತ್ಮಕ ನಿರ್ಣಯವನ್ನು ಜನವರಿ 27ರಂದು ತೆಗೆದುಕೊಂಡಿದ್ದು, ಭಾರತದ ಸಂವಿಧಾನದ ಪ್ರಕಾರ ವಿಧಾನಪರಿಷತ್ ರದ್ದುಗೊಳಿಸಲು ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯವಾಗಿರುತ್ತದೆ.