Job Description: ನವದೆಹಲಿ: ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋ-ಆಪರೇಟೀವ್ ಬ್ಯಾಂಕ್ ಗಳಲ್ಲಿ ಠೇವಣಿದಾರರ ಭದ್ರತೆಗಾಗಿ ಕೇಂದ್ರ ಸರ್ಕಾರವು "ಬ್ಯಾಂಕ್ ನಿಯಂತ್ರಣ ಕಾಯ್ದೆ ತಿದ್ದುಪಡಿ ಮಸೂದೆ"ಗೆ ಲೋಕಸಭೆಯಲ್ಲಿ ಅಂಗೀಕರಿಸಿದೆ. ಈ ತಿದ್ದುಪಡಿ ಮಸೂದೆಯ ಮೂಲಕ ಕೋ-ಆಪರೇಟೀವ್ ಬ್ಯಾಂಕ್ ಗಳನ್ನು RBI ನ ಮೇಲ್ವಿಚಾರಣೆ ವ್ಯಾಪ್ತಿಗೆ ತರುವುದು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ. ಅಲ್ಲದೆ ಕೋ-ಆಪರೇಟೀವ್ ಬ್ಯಾಂಕ್ ಗಳ ಆಡಳಿತ ಹಾಗೂ ಠೇವಣಿದಾರರ ಹಣವನ್ನು ರಕ್ಷಣೆ ಈ ಕಾಯ್ದೆಯ ಉದ್ದೇಶವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.