Job Description: ನವದೆಹಲಿ : ಇತ್ತೀಚಿಗೆ ಲೋಕಸಭೆಯಲ್ಲಿ ಅಂಗೀಕರಿಸಿದ ಕೃಷಿ ಸಂಬಂಧಿತ ಮಸೂದೆಗಳಿಗೆ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅವರು ವಿರೋಧ ವ್ಯಕ್ತಪಡಿಸಿ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ರೈತ ವಿರೋಧಿ ಸುಗ್ರೀವಾಜ್ಞೆ ಮತ್ತು ಶಾಸನವನ್ನು ವಿರೋಧಿಸಿ ನಾನು ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಕುರಿತು ಹೆಮ್ಮೆ ಪಡುತ್ತೇನೆ. ಹಾಗೂ ರೈತರ ಸಮಸ್ಯೆಗಳನ್ನು ಪರಿಹರಿಸದೆ ಕೃಷಿ ಕ್ಷೇತ್ರದ ಮಸೂದೆಗಳನ್ನು ತಂದ ಸರ್ಕಾರದ ಭಾಗವಾಗಲು ನಾನು ಇಚ್ಛೆಪಡುವದಿಲ್ಲ ಎಂದು ಅವರು ತಿಳಿಸಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಅಕಾಲಿ ದಳದ ಸಂಸದೆ ಮತ್ತು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.