Job Description: ನವದೆಹಲಿ: ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ವಿರೋಧದ ನಡುವೆಯೇ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಎರಡು ಮಸೂದೆಗಳಿಗೆ ರಾಜ್ಯಸಭೆ ಧ್ವನಿಮತದ ಅಂಗೀಕಾರ ನೀಡಿತು. * ಈ ಮಸೂದೆಯನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮಂಡಿಸಿದರು. * ಈ ಹೊಸ ವಿಧೇಯಕಗಳನ್ನು ದೇಶಾದ್ಯಂತ ವಿರೋಧ ವ್ಯಕ್ತವಾಗಿದ್ದು, ಅದರಲ್ಲೂ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ವಿರೋಧ ಹೆಚ್ಚಾಗಿದೆ. * ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ ಮತ್ತು ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ (ಸಬಲೀಕರಣ ಮತ್ತು ರಕ್ಷಣೆ) ಮಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.