Job Description: ದೇಶದ ಖಾಸಗಿ ಹಾಗು ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯ ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ ಜಾರಿಗೊಳಿಸುವ ಸದುದ್ದೇಶದಿಂದ ಬಹು ಮುಖ್ಯವಾದ ಬ್ಯಾಂಕಿಂಗ್ ನಿಯಂತ್ರಕ ತಿದ್ದುಪಡಿ ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆಯ ಅನುಮೋದನೆ ನೀಡಲಾಗಿದೆ. ಈ ತಿದ್ದುಪಡಿ ಮಸೂದೆ ಮೂಲಕ ವಾಣಿಜ್ಯ ಮತ್ತು ಸಹಕಾರಿ ಬ್ಯಾಂಕುಗಳನ್ನು ಸಂಪೂರ್ಣವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗಸೂಚಿಗಳಡಿಯಲ್ಲಿ ಕಾರ್ಯನಿರ್ವಹಿಸಲಿವೆ. * 1949ರಲ್ಲಿ ಮೊದಲ ಬಾರಿ ಬ್ಯಾಂಕಿಂಗ್ ನಿಯಂತ್ರಕ ಕಾಯ್ದೆ ಜಾರಿಗೆ ಬಂದಾಗ ಸಹಕಾರಿ ಬ್ಯಾಂಕುಗಳು ಆರ್ಬಿಐ ವ್ಯಾಪ್ತಿಯಲ್ಲಿ ಇರಲಿಲ್ಲ. ನಂತರ 1965ರಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸಹಕಾರಿ ಬ್ಯಾಂಕುಗಳನ್ನು ಆರ್ಬಿಐ ವ್ಯಾಪ್ತಿಗೆ ಒಳಪಡಿಸಲಾಯಿತು.