Job Description: ನವದೆಹಲಿ : ದೇಶದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಹಲವು ರಾಷ್ಟ್ರಗಳಿಗೆ ಭೇಟಿ ನೀಡಿ ದ್ವಿಪಕ್ಷೀಯ ಒಪ್ಪಂದಗಳಿಗೆ ಸಾಕ್ಷಿಯಾಗಿದ್ದಾರೆ. 'ಪ್ರಧಾನಿ ನರೇಂದ್ರ ಮೋದಿ 2015 ರಿಂದ ಇಲ್ಲಿಯವರೆಗೆ ಒಟ್ಟು 58 ದೇಶಗಳಿಗೆ ಭೇಟಿ ನೀಡಿದ್ದು, ಈ ಪ್ರವಾಸಗಳಿಗಾಗಿ 517.82 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ವಿದೇಶಾಂಗ ಸಚಿವ ವಿ ಮುರಳೀಧರನ್ ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ಉತ್ತರದ ಮೂಲಕ ಮಾಹಿತಿ ನೀಡಿದ್ದಾರೆ.