Job Description: ಉಡುಪಿ: ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದಿಂದ ನೀಡಲಾಗುವ ಪ್ರತಿಷ್ಠಿತ 2020ನೇ ಸಾಲಿನ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. * ಕೋಟ ಶಿವರಾಮ ಕಾರಂತರ ಜನ್ಮದಿನವಾದ ಅ.10ರಂದು ಕೋಟ ಕಾರಂತ ಥೀಮ್ ಪಾರ್ಕ್ನಲ್ಲಿ ಭೈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. * ಈ ಪ್ರಶಸ್ತಿಯನ್ನು 2005 ರಿಂದ ಆರಂಭಿಸಲಾಗಿದ್ದು, ಈಗಾಗಲೇ ರಾಜ್ಯದ ರವಿ ಬೆಳಗೆರೆ, ವೀರಪ್ಪಮೊಯ್ಲಿ, ನಿವೃತ್ತ ನ್ಯಾಯಮೂರ್ತಿ ವೆಂಕಟಾಚಲಯ್ಯ, ಗಿರೀಶ್ ಕಾಸರವಳ್ಳಿ, ಸಾಲುಮರದ ತಿಮ್ಮಕ್ಕ, ನಟ ಪ್ರಕಾಶ್ ರೈ ಸಹಿತ 15 ಸಾಧಕರು ಗೌರವಕ್ಕೆ ಪಾತ್ರರಾಗಿದ್ದಾರೆ.