Job Description: ಚೆನ್ನೈ : ಭಾರತದ ಹೆಮ್ಮಯ ಪುತ್ರ, ಖ್ಯಾತ ಹಿನ್ನಲೆ ಗಾಯಕ, ಪದ್ಮವಿಭೂಷಣ ಡಾ. ಎಸ್ .ಪಿ. ಬಾಲಸುಬ್ರಹ್ಮಣ್ಯಂ ಅವರು ಅನಾರೋಗ್ಯ ಕಾರಣ ತಮ್ಮ 74 ನೇ ವಯಸ್ಸಿನಲ್ಲಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ದಿನಾಂಕ 25 ಸೆಪ್ಟೆಂಬರ್ 2020 ರಂದು ಮಧ್ಯಾಹ್ನ ನಿಧನರಾದರು. ಎಸ್ ಪಿ ಬಾಲಸುಬ್ರಮಣ್ಯ ಅವರ ಕಲಾ ಸೇವೆಗೆ ಭಾರತ ಸರ್ಕಾರ 2011ರಲ್ಲಿ ಪದ್ಮಶ್ರೀ, 2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 1946 ರ ಜೂನ್ 4 ರಂದು ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಜನಿಸಿದ ಇವರು ಕನ್ನಡ, ತಮಿಳು, ತೆಲುಗು, ಹಿಂದಿ, ಸೇರಿ ಭಾರತೀಯ ಒಟ್ಟು 16 ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ ನೀಡಿದ್ದಾರೆ