Job Description: ಹೊಸದಿಲ್ಲಿ: ಇತ್ತೀಚಿಗಷ್ಟೇ ಸಂಸತ್ತಿನಲ್ಲಿ ಅನುಮೋದನೆ ಪಡೆದ ಮೂರು ರೈತ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ ಅವರು ಅಂಕಿತ ಹಾಕಿದ್ದಾರೆ. ವಿರೋಧ ಪಕ್ಷಗಳು ಈ ಮಸೂದೆಗಳು ದೇಶದ ರೈತರ ಹಿತಕ್ಕೆ ಮಾರಕ ಹಾಗೂ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ದುರುದ್ದೇಶ ಹೊಂದಿವೆ ಎಂದು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ರೈತ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಹಾಗೂ ಸೌಲಭ್ಯ) ಮಸೂದೆ, 2020, ರೈತರ (ಸಶಕ್ತೀಕರಣ ಹಾಗೂ ರಕ್ಷಣೆ) ಬೆಲೆ ಖಚಿತತೆ ಒಪ್ಪಂದ ಹಾಗೂ ರೈತ ಸೇವಾ ಮಸೂದೆ, 2020 ಹಾಗೂ ಅತ್ಯಗತ್ಯ ವಸ್ತುಗಳ (ತಿದ್ದುಪಡಿ) ಮಸೂದೆ, 2020 ಈ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಇಂದು ತಮ್ಮ ಅಂಕಿತವನ್ನು ಹಾಕಿದ್ದಾರೆ. ಶೀಘ್ರದಲ್ಲೇ ಈ ಮಸೂದೆಗಳು ಕಾಯ್ದೆ ರೂಪದಲ್ಲಿ ಜಾರಿಗೆ ಬರಲಿವೆ