Job Description: ಬೆಂಗಳೂರು: ಕನ್ನಡ ಸಾಹಿತ್ಯ ಕ್ಷೇತ್ರದ ಖ್ಯಾತ ವಿಮರ್ಶಕರಾಗಿದ್ದ ಡಾ ಗುರುರಾಜ ಶ್ಯಾಮಾಚಾರ ಆಮೂರ ಅವರು ಬೆಂಗಳೂರಿನ ಸ್ವಗೃಹದಲ್ಲಿ ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾದರು. ಹಾವೇರಿ ಜಿಲ್ಲೆಯ ಬೊಮ್ಮನಹಳ್ಳಿ ಮೂಲದವರಾದ ಇವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಔರಂಗಾಬಾದ್ ನ ಮರಾಠವಾಡ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿಯ ನಂತರದ ದಿನಗಳಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಸಾಹಿತ್ಯಕ್ಕೆ ತಮ್ಮ ಸಾಹಿತ್ಯ ಕೊಡುಗೆ ನೀಡಿದ್ದು, ಆಧುನಿಕ ಕನ್ನಡಸಾಹಿತ್ಯ ವಿಮರ್ಶಕರಲ್ಲಿ ಅತಿ ಅಗ್ರಮಾನ್ಯ ಎನಿಸಿದ್ದರು, ಇವರ ಸಾಹಿತ್ಯ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ, ಮಾಸ್ತಿ ಅಯ್ಯಂಗಾರ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಗೌರವಗಳಿಗೆ ಪಾತ್ರರಾಗಿದ್ದಾರೆ.