Job Description: ನವದೆಹಲಿ: ಇಂಫಾಲ್, ಚೆನ್ನೈ ಹಾಗೂ ರಾಂಚಿ ನಗರಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ(National investigation agency) ಹೊಸ ಶಾಖೆಗಳನ್ನು ಆರಂಭಿಸಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳು ಹಾಗೂ ರಾಷ್ಟ್ರೀಯ ಭದ್ರತೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸುತ್ತದೆ. ಪ್ರಸ್ತುತ ತನಿಖಾ ಸಂಸ್ಥೆಯು ಗುವಾಹಟಿ, ಮುಂಬೈ, ಜಮ್ಮು, ಕೋಲ್ಕತ್ತ, ಹೈದರಾಬಾದ್, ಕೊಚ್ಚಿ, ಲಖನೌ, ರಾಯ್ಪುರ ಮತ್ತು ಚಂಡೀಗಡದಲ್ಲಿ ತನ್ನ ಕಚೇರಿಯನ್ನು ಹೊಂದಿದೆ. ಅಲ್ಲದೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎನ್ಐಎ ವಿಶೇಷ ಘಟಕಗಳನ್ನು ಹೊಂದಿದೆ.