Job Description: ಲಖನೌ: ತೀವ್ರ ಕುತೂಹಲ ಕೆರಳಿಸಿದ್ದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಖನೌ ಸಿಬಿಐ ವಿಶೇಷ ಕೋರ್ಟ್ ತನ್ನ ತೀರ್ಪು ಪ್ರಕಟಿಸಿದೆ ಈ ಪ್ರಕರಣದ ಪ್ರಮುಖ ಆರೋಪಿಗಳಾದ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ ಸೇರಿ ಎಲ್ಲಾ 32 ಮಂದಿ ಆರೋಪಿಗಳಿಗೆ ಕ್ಲೀನ್ ಚಿಟ್ ಸಿಕ್ಕಿದ್ದು, 28 ವರ್ಷಗಳ ದೀರ್ಘ ಕಾಲದ ಬಳಿಕ ಪ್ರಕರಣಕ್ಕೆ ಅಂತ್ಯ ಸಿಕ್ಕಿದೆ. " ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕೇವಲ ಒಂದು ಆಕಸ್ಮಿಕ ಘಟನೆಯಾಗಿದ್ದು, ಯಾವುದೇ ಪೂರ್ವ ನಿಯೋಜಿತ ಕೃತ್ಯವಾಗಿರುವದಿಲ್ಲ, ಹಾಗೂ ಉದ್ದೇಶಪೂರ್ವಕವಾಗಿ ಮಸೀದಿಯನ್ನು ನಾಶಮಾಡಿರುವುದಕ್ಕೆ ಯಾವುದೇ ಪ್ರಬಲ ಸಾಕ್ಷಾಧಾರಗಳಿರುವದಿಲ್ಲ ಹಾಗಾಗಿ ಈ ಪ್ರಕರಣದ ಎಲ್ಲ ಆರೋಪಿಗಳು ನಿರ್ದೋಷಿಗಳು" ಎಂದು ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಸ್ ಕೆ ಯಾದವ್ ತೀರ್ಪು ಪ್ರಕಟಿಸಿದ್ದಾರೆ.