Job Description: ಬೆಂಗಳೂರು: ಭಾರತದ ಪಶ್ಚಿಮಘಟ್ಟ ಪ್ರದೇಶದ ಪರಿಸರ ಸೂಕ್ಷ್ಮ ಪ್ರದೇಶಗಳಿಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯನ್ನು ಇದೆ ಡಿಸೆಂಬರ್ 31 ರೊಳಗೆ ಸಂಬಂಧಪಟ್ಟ ರಾಜ್ಯಗಳಲ್ಲಿ ಜಾರಿಗೊಳಿಸುವಂತೆ ಗಡವು ನೀಡಿ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಆದೇಶ ಹೊರಡಿಸಿದೆ. ಅಲ್ಲದೆ ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಹಾಗೂ ವಿಳಂಬ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಧಿಕರಣ ತಿಳಿಸಿದೆ.