Job Description: ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಗತಿಯಲ್ಲಿರುವ 'ನಮ್ಮ ಮೆಟ್ರೊ' ಎರಡನೇ ಹಂತದ ಕಾಮಗಾರಿಯಲ್ಲಿ ನಿರ್ಮಾಣವಾಗುತ್ತಿರುವ ಹೆಬ್ಬಗೋಡಿ ಮೆಟ್ರೊ ನಿಲ್ದಾಣದ ಅಭಿವೃದ್ದಿಗಾಗಿ ಬಯೋಕಾನ್ ಫೌಂಡೇಷನ್ ನಿಂದ ₹65 ಕೋಟಿ ರೂಪಾಯಿ ಅನುದಾನ ನೀಡಲಾಯಿತು. ಈ ಕುರಿತು ಒಪ್ಪಂದಕ್ಕೆ ಬಯೋಕಾನ್ ಫೌಂಡೇಷನ್ ಮತ್ತು ಬೆಂಗಳೂರು ಮೆಟ್ರೊ ರೈಲು ನಿಗಮ ಅಕ್ಟೋಬರ್ 08 ರಂದು ಪರಸ್ಪರ ಸಹಿ ಹಾಕಿದವು. * ಇದೆ ವೇಳೆ ಹೆಬ್ಬಗೋಡಿ ಮೆಟ್ರೋ ನಿಲ್ದಾಣಕ್ಕೆ "ಬಯೋಕಾನ್ ಹೆಬ್ಬಗೋಡಿ ಮೆಟ್ರೊ ನಿಲ್ದಾಣ' ಎಂದು ನಾಮಕರಣ ಮಾಡಲು ಉಭಯ ಸಂಸ್ಥೆಗಳು ಸರ್ಕಾರವನ್ನು ಕೋರಲಿವೆ. * ಬಯೋಕಾನ್ ಫೌಂಡೇಷನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ ಹಾಗೂ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಈ ವೇಳೆಯಲ್ಲಿ ಉಪಸ್ಥಿತರಿದ್ದರು.