Job Description: ಅಕ್ಟೋಬರ್ 16 ರಂದು ವಿಶ್ವಸಂಸ್ಥೆಯ ಆಹಾರ ಹಾಗೂ ಕೃಷಿ ಸಂಸ್ಥೆಯ ತನ್ನ 75ನೇ ವರ್ಷದ ವಾರ್ಷಿಕೋತ್ಸವದ ಆಚರಿಸಿಕೊಳ್ಳುತ್ತಿದ್ದು, ಈ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 75 ರೂಪಾಯಿ ಮುಖಬೆಲೆಯ ನಾಣ್ಯವನ್ನ ಬಿಡುಗಡೆ ಮಾಡಲಿದ್ದು, ಈ ಮೂಲಕ ಭಾರತ ಹಾಗೂ FAO (Food and Agriculture Organization of the United Nations) ನಡುವಿನ ಬಾಂಧವ್ಯವನ್ನು ಮತ್ತಷ್ಟು ಉತ್ತಮಗೊಳಿಸಲಾಗುತ್ತಿದೆ. ವಿಶ್ವಸಂಸ್ಥೆಯ ಆಹಾರ ಹಾಗೂ ಕೃಷಿ ಸಂಸ್ಥೆ : ವಿಶ್ವಸಂಸ್ಥೆಯ ವಿಶೇಷ ಭಾಗವಾಗಿರುವ ಆಹಾರ ಮತ್ತು ಕೃಷಿ ಸಂಸ್ಥೆ ಸಂಸ್ಥೆಯು, ಹಸಿವನ್ನು ನೀಗಿಸಲು ಪೋಷಣೆ ಮತ್ತು ಆಹಾರ ಸುರಕ್ಷತೆಯನ್ನು ಸುಧಾರಿಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ. ಈ ಸಂಸ್ಥೆಯು ಅಕ್ಟೋಬರ್ 1945 ರಲ್ಲಿ ಕಾರ್ಯಾರಂಭ ಮಾಡಿತು.