Job Description: ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಅಧೀನದಲ್ಲಿ ಒಟ್ಟು ಐದು ವಿದ್ಯುತ್ ಸರಬರಾಜು ನಿಗಮಗಳಿದ್ದು, ಇವುಗಳ ಪೈಕಿ ಮೂರು ನಿಗಮಗಳನ್ನು ಖಾಸಗೀಕರಣಗೊಳಿಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ವಿದ್ಯುತ್ ವಲಯವನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ರಾಜ್ಯದ ಎಲ್ಲ ಎಸ್ಕಾಂಗಳೂ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿದ್ದು, ಇವುಗಳ ಖಾಸಗೀಕರಣ ಈಗಿನ ಪರಿಸ್ಥಿತಿಯಲ್ಲಿ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರವು ಕೇಂದ್ರಕ್ಕೆ ಪ್ರತಿಕ್ರಿಯೆ ನೀಡಿದೆ. ರಾಜ್ಯದ ಬೆಸ್ಕಾಂ (ಬೆಂಗಳೂರು), ಚೆಸ್ಕಾಂ (ಮೈಸೂರು) ಮತ್ತು ಜೆಸ್ಕಾಂ (ಕಲಬುರಗಿ) ಸೇರಿ ಭಾರತದಲ್ಲಿನ ಒಟ್ಟು 34 ಎಸ್ಕಾಂಗಳನ್ನು ಖಾಸಗೀಕರಣಗೊಳಿಸಬಹುದೆಂದು ಕೇಂದ್ರ ಸರ್ಕಾರ ಹೇಳಿತ್ತು.