Job Description: ನವದೆಹಲಿ: ಭಾರತದಲ್ಲಿ ಎಲ್ಲಿರಿಗೂ ತಿಳಿದಿರುವಂತೆ ಪ್ರಸ್ತುತ ಹೆಣ್ಣು ಮಕ್ಕಳ ಮದುವೆ ವಯಸ್ಸು, 18 ವರ್ಷ ಆಗಿದ್ದು, ಇನ್ನು ಗಂಡು ಮಕ್ಕಳ ಮದುವೆ ವಯಸ್ಸು 21 ಆಗಿದೆ. ಹಲವು ವರ್ಷಗಳಿಂದ ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು ಪರಿಸ್ಕರಿಸುವಂತೆ ಆಗ್ರಹಿಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರವು ಈ ಕುರಿತು ಅಧ್ಯಯನ ನಡೆಸಿ ಶಿಫಾರಸ್ಸು ಮಾಡಲು ಸಮಿತಿಯೊಂದನ್ನು ನೇಮಿಸಿದೆ. ಈ ಸಮಿತಿಯ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರವು ನಿರ್ಣಯ ತೆಗೆದುಕೊಳ್ಳುವುದಾಗಿ ಪ್ರಧಾನಿ ಮೋದಿಯವರು ಇತ್ತೀಚಿಗೆ ಸಮಾರಂಭವೊಂದರಲ್ಲಿ ತಿಳಿಸಿದ್ದಾರೆ. * ಭಾರತದ ಹೆಣ್ಣು ಮಕ್ಕಳು ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳನ್ನು ಸಾಧನೆ ಮಾಡುತ್ತಿರುವದರಿಂದ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಈ ನಿರ್ಧಾರ ಪ್ರಾಮುಖ್ಯತೆ ಪಡೆದಿದೆ.