Job Description: ನವದೆಹಲಿ: ದೇಶದ ಸರ್ಕಾರಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ JEE (ಜಂಟಿ ಪ್ರವೇಶ ಪರೀಕ್ಷೆ) ಪರೀಕ್ಷೆಗಳನ್ನು ಇನ್ನುಮುಂದೆ ಕನ್ನಡ ಸೇರಿ 8 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಇಲ್ಲಿಯವರೆಗೂ JEE ಪರೀಕ್ಷೆಯನ್ನು ಕೇವಲ ಇಂಗ್ಲಿಷ್, ಹಿಂದಿ ಹಾಗೂ ಗುಜರಾತಿ ಭಾಷೆಯಲ್ಲಿ ಬರೆಯಲು ಮಾತ್ರ ಅವಕಾಶ ನೀಡಲಾಗಿತ್ತು, ಆದರೆ 2021ರ ಜನವರಿಯಿಂದ ಅನ್ವಯಿಸುವಂತೆ ಹೊಸದಾಗಿ ಕನ್ನಡ ಸೇರಿ 8 ಭಾಷೆಗಳಿಗೆ ಅವಕಾಶ ನೀಡಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಆದೇಶಿಸಿದೆ. ಕನ್ನಡ, ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಮರಾಠಿ, ಒಡಿಯಾ, ತಮಿಳು, ತೆಲುಗು ಹಾಗೂ ಉರ್ದುವಿನಲ್ಲಿ ಇನ್ನು ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ.