Job Description: ಹಾವೇರಿ : ಈ ಬಾರಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಯೋಜಿಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಕಡಿಮೆಯಾದ ಬಳಿಕವಷ್ಟೇ ಸಮ್ಮೇಳನಕ್ಕೆ ದಿನಾಂಕವನ್ನು ನಿಗದಿಪಡಿಸುವುದಾಗಿ ಅವರು ತಿಳಿಸಿದರು. * 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರಗಿ ಜಿಲ್ಲೆಯಲ್ಲಿ 2020ರ ಫೆಬ್ರುವರಿ ತಿಂಗಳಿನಲ್ಲಿ ನಡೆಸಲಾಗಿತ್ತು, ಹಾಗೂ ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಕವಿ ಎಚ್ ಎಸ್ ವೆಂಕಟೇಶಮೂರ್ತಿ ಅವರು ವಹಿಸಿದ್ದರು.