Job Description: ಭಾರತವು ಸ್ವಾತಂತ್ರ್ಯ ಪಡೆದ ನಂತರ ರಚಿಸಲಾದ ಮೊದಲ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಸಚಿವರು ಹಾಗೂ ಭಾರತ ರತ್ನ ಗೌರವಕ್ಕೆ ಪಾತ್ರರಾದ ಡಾ.ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ನವೆಂಬರ್ 11ರಂದು ದೇಶದಾದ್ಯಂತ ಆಚರಿಸಲಾಗುತ್ತದೆ. ಇವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು 2008 ರಿಂದ ನವೆಂಬರ್ 11 ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲು ಕರೆ ನೀಡಿತು.