Job Description: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಾಂಕ ನವೆಂಬರ್ 19ರಿಂದ ಮೂರು ದಿನಗಳವರೆಗೆ 'ಬೆಂಗಳೂರು ತಂತ್ರಜ್ಞಾನ ಶೃಂಗಸಭೆ' (BTS) ನಡೆಯಲಿದೆ. ಈ ಶೃಂಗದಲ್ಲಿ ಸುಮಾರು 25ಕ್ಕೂ ಹೆಚ್ಚು ರಾಷ್ಟ್ರದ ಪ್ರತಿನಿಧಿಗಳು ಭಾಗಿಯಾಗಲಿದ್ದು, ಅನೇಕ ತಂತ್ರಜ್ಞಾನ ಕ್ಷೇತ್ರದ ಒಪ್ಪಂದಗಳು ಏರ್ಪಡುವ ಸಾಧ್ಯತೆಯಿದ್ದು, ಈಗಾಗಲೇ ಕೃಷಿ, ಸಂಶೋಧನೆ, ಅಭಿವೃದ್ಧಿ, ಸ್ಟಾರ್ಟ್ ಅಪ್ʼಗಳ ಸ್ಥಾಪನೆ ಪಾಲುದಾರಿಕೆ ಸೇರಿ ಏಳು ವಿವಿಧ ಒಪ್ಪಂದಗಳು ಸಹಿಗೂ ಸಿದ್ಧವಾಗಿರುವುದಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. * ಈ ಶೃಂಗ ಸಭೆಯಲ್ಲಿ ಆಸ್ಟ್ರೇಲಿಯಾ, ಫ್ರಾನ್ಸ್, ಜರ್ಮನಿ, ಇಸ್ರೇಲ್, ನೆದರ್ಲ್ಯಾಂಡ್, ಸ್ವಿಡ್ಜರ್ಲೆಂಡ್ ಮತ್ತು ಇಂಗ್ಲೆಂಡ್ ಪಾಲುದಾರ ದೇಶಗಳಾಗಿವೆ.