Job Description: ರಾಜ್ಯದ ಹಿರಿಯ ಪತ್ರಕರ್ತ, ನಟ, ಬರಹಗಾರ, ನಿರೂಪಕ ರವಿ ಬೆಳಗೆರೆಯವರು ದಿನಾಂಕ ನವೆಂಬರ್ 13 ರಂದು ತಮ್ಮ 62 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಬೆಳೆಗೆರೆಯವರು ಹಾಯ್ ಬೆಂಗಳೂರ್ ವಾರಪತ್ರಿಕೆ, ಮತ್ತು ಓ ಮನಸೇ ಪಾಕ್ಷಿಕದ ಸಂಪಾದಕರಾಗಿದ್ದರು. ಬೆಂಗಳೂರಿನಲ್ಲಿ ಪ್ರಾರ್ಥನಾ ಹೆಸರಿನ ಶಾಲೆ ನಡೆಸುತ್ತಿದ್ದರು. ಸುಮಾರು ಐವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ರವಿ ಬೆಳೆಗೆರೆಯವರು ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕೋಟಾ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ, ಅನುವಾದ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಭಾಜನರಾಗಿದ್ದಾರೆ.