Job Description: ಪಟ್ನಾ : ಇತ್ತೀಚಿಗೆ ನಡೆದ ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶದ ನಂತರ ಬಹುಮತಕ್ಕೆ ಅಗತ್ಯವಿದ್ದ 122 ಸ್ಥಾನಗಳ ಪೈಕಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) ಒಟ್ಟು 125 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದ್ದು, ಈ ಪೈಕಿ ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ವಿಜಯ ಸಾಧಿಸಿತ್ತು. ಎನ್ ಡಿಎ ಮೈತ್ರಿಕೂಟದ ಶಾಸಕರ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಆಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು, ಅದರಂತೆ ಸತತ ನಾಲ್ಕನೆಯ ಅವಧಿಗೆ ಬಿಹಾರ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ದಿನಾಂಕ 16 ನವೆಂಬರ್ ಸೋಮವಾರದಂದು ಪ್ರಮಾಣವಚನ ಸ್ವೀಕರಿಸಿದರು. 2000ನೇ ವರ್ಷದಿಂದ ಇಲ್ಲಿಯವರೆಗೂ ನಿತೀಶ್ ಕುಮಾರ್ ಒಟ್ಟು ಏಳು ಬಾರಿ ಮುಖ್ಯಮಂತ್ರಿ ಹುದ್ದೆಗೇರಿದಂತಾಯಿತು. * ಬಿಹಾರದ 37ನೇ ಮುಖ್ಯಮಂತ್ರಿಯಾಗಿ ನಿತೀಶ್ ಅವರು ಪ್ರಮಾಣ ವಚನ ಸ್ವೀಕರಿಸಿದರು.